
ಬೆಥನಿಆಂಗ್ಲಮಾಧ್ಯಮಶಾಲೆ: ರಕ್ಷಕ-ಶಿಕ್ಷಕಸಂಘದ ಪದಾಧಿಕಾರಿಗಳ ಹಾಗೂಮಕ್ಕಳಸುರಕ್ಷಾಸಮಿತಿಯಅಧ್ಯಕ್ಷರಆಯ್ಕೆ
- Posted by bethanympbes@gmail.com
- Categories News and Events
- Date July 18, 2025
- Comments 0 comment
ಪುತ್ತೂರು: ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿಗೆ ಶಾಲಾ ರಕ್ಷಕ-ಶಿಕ್ಷಕ ಸಂಘದ (PTA) ಪದಾಧಿಕಾರಿಗಳ ಹಾಗೂ ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಬೆಥನಿ ಶಾಲಾ ಸಭಾಂಗಣದಲ್ಲಿ ನಡೆದ ನೂತನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಆಯ್ಕೆಗಳನ್ನು ಅಂತಿಮಗೊಳಿಸಲಾಯಿತು. ಶಾಲಾ ಸಂಚಾಲಕಿ ಹಾಗೂ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಭಗಿನಿ ಪ್ರಶಾಂತಿ ಬಿ.ಎಸ್. ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಬೃಂದಾ ಅವರು ಹಿಂದಿನ ಸಭೆಯ ವರದಿಯನ್ನು ವಾಚಿಸಿದರು.
ಕಾರ್ಯಕಾರಿ ಸಮಿತಿಯ ಸದಸ್ಯರ ಸಮ್ಮತಿಯೊಂದಿಗೆ, ಶ್ರೀ ರಘುನಾಥ್ ರೈ ಅವರನ್ನು ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಮಕ್ಕಳ ಸುರಕ್ಷಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಇಸ್ಮಾಯಿಲ್ ಶಾಫಿ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೆರೆಸಾ ಸಿಕ್ವೇರಾ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಹಾಗೂ ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಬಿ.ಎಸ್. ರವರು ಅಭಿನಂದಿಸಿದರು.
ನೂತನವಾಗಿ ಆಯ್ಕೆಯಾದ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ರಘುನಾಥ್ ರೈ ಅವರು ಮಾತನಾಡಿ, “ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಕರ್ತವ್ಯಗಳನ್ನು ಮರೆಯುತ್ತಾರೆ. ಶಾಲೆಯ ಅಭಿವೃದ್ಧಿಗಾಗಿ ನಮ್ಮ ಕರ್ತವ್ಯಗಳನ್ನು ಅರಿತು ಒಟ್ಟಾಗಿ ದುಡಿಯಬೇಕು. ಇದಕ್ಕೆ ನಿಮ್ಮೆಲ್ಲರ ಸಹಕಾರ ಅನಿವಾರ್ಯ” ಎಂದು ನುಡಿದರು.
ಶಾಲಾ ಶಿಕ್ಷಕಿ ಶ್ರೀಮತಿ ಅನಿತಾ ರೊಡ್ರಿಗಸ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.
You may also like
Care for the care takers

